ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಉದ್ಯೋಗ ಪ್ರಕಟಣೆ ಹೋರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ (DHFWS Raichur Recruitment 2026) ಆಹ್ವಾನಿಸಲಾಗಿದೆ.
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಕಲ್ಯಾಣ ಕರ್ನಾಟಕ ಭಾಗದ, ಅದರಲ್ಲೂ ವಿಶೇಷವಾಗಿ ರಾಯಚೂರು ಜಿಲ್ಲೆಯ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ.
ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (ರಿ), ರಾಯಚೂರು ವತಿಯಿಂದ ಒಟ್ಟು 20 ‘ಕಿರಿಯ ಮಹಿಳಾ ಆರೋಗ್ಯ ಸಹಾಯಕಿ’ ಹಾಗೂ ‘ಆರೋಗ್ಯ ನಿರೀಕ್ಷಣಾಧಿಕಾರಿ’ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಅರ್ಜಿ ಶುಲ್ಕ ಇರುವುದಿಲ್ಲ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಉದ್ಯೋಗದ ಸಂಪೂರ್ಣ ವಿವರ ಹಾಗೂ ಅಧಿಕೃತ ಮಾಹಿತಿ ಈ ಕೆಳಗಿನಂತಿದೆ.
ಸಂಕ್ಷಿಪ್ತ ವಿವರ:
- ಇಲಾಖೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS), ರಾಯಚೂರು
- ವೇತನ: 15,397 ರೂ.
- ಒಟ್ಟು ಹುದ್ದೆಗಳು: 20
- ಉದ್ಯೋಗ ಸ್ಥಳ: ರಾಯಚೂರು ಜಿಲ್ಲೆ
ಹುದ್ದೆಗಳ ವಿವರ:
- ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ನಮ್ಮ ಕ್ಲಿನಿಕ್ ಹಾಗೂ NUHM): ಒಟ್ಟು 19 ಹುದ್ದೆಗಳು
- ಆರೋಗ್ಯ ನಿರೀಕ್ಷಣಾಧಿಕಾರಿಗಳು (NUHM): 01 ಹುದ್ದೆ
ವೇತನ ಶ್ರೇಣಿ:
- ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು: 14,044 ರೂ. ದಿಂದ 15,397 ರೂ.
- ಆರೋಗ್ಯ ನಿರೀಕ್ಷಣಾಧಿಕಾರಿಗಳು: 15,397 ರೂ.
ಶೈಕ್ಷಣಿಕ ಅರ್ಹತೆ:
- ಕಿರಿಯ ಮಹಿಳಾ ಆರೋಗ್ಯ ಸಹಾಯಕಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿಂದ ‘ಕಿರಿಯ ಮಹಿಳಾ ಆರೋಗ್ಯ ಸಹಾಯಕಿ’ ತರಬೇತಿ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
- ಆರೋಗ್ಯ ನಿರೀಕ್ಷಣಾಧಿಕಾರಿ (Health Inspector): ಎಸ್‌ಎಸ್‌ಎಲ್‌ಸಿ (SSLC) ಜೊತೆಗೆ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿ, ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ಅಥವಾ 3 ವರ್ಷಗಳ ‘ಆರೋಗ್ಯ ನಿರೀಕ್ಷಕರ ಡಿಪ್ಲೊಮಾ’ (Health Inspector Diploma) ಹೊಂದಿರಬೇಕು.
ವಯೋಮಿತಿ ಮತ್ತು ಅರ್ಜಿ ಶುಲ್ಕ:
- ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.
- ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಯಾವುದೇ ಪರೀಕ್ಷೆ ಇರುವುದಿಲ್ಲ. ರೋಸ್ಟರ್ ಕಂ ಮೆರಿಟ್ (Roster cum Merit) ಆಧಾರದ ಮೇಲೆ, ಅಂದರೆ ಮೀಸಲಾತಿ ಮತ್ತು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುತ್ತದೆ.
ಇವರಿಗೆ ಸಿಗಲಿದೆ ವಿಶೇಷ ಆದ್ಯತೆ (ಬೋನಸ್ ಅಂಕಗಳು):
- ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ (ಒಂದು ವರ್ಷದ ಸೇವೆಗೆ 10 ಅಂಕಗಳಂತೆ, ಗರಿಷ್ಠ 2 ವರ್ಷಕ್ಕೆ 20 ಕೃಪಾಂಕ ನೀಡಲಾಗುತ್ತದೆ).
- ಕೋವಿಡ್-19 (Covid-19) ಸಾಂಕ್ರಾಮಿಕದ ವೇಳೆ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಿದ ‘ಕೋವಿಡ್ ವಾರಿಯರ್ಸ್’ಗೆ ವಿಶೇಷ ಆದ್ಯತೆ ಇರಲಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-02-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2026
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಕಲ್ಯಾಣ ಕರ್ನಾಟಕ (371J) ಮೀಸಲಾತಿ ಕೋರುವವರು ಸಂಬಂಧಪಟ್ಟ ಪ್ರಮಾಣಪತ್ರವನ್ನು ಲಗತ್ತಿಸುವುದು ಕಡ್ಡಾಯ. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರಲೇಬೇಕು.
Application Link:
- ಅಧಿಸೂಚನೆ: ಡೌನ್ಲೋಡ್
- ಆನ್‌ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್:
raichur.nic.in
“ವೈದ್ಯಕೀಯ ಹಾಗೂ ನರ್ಸಿಂಗ್ ವಿಭಾಗದಲ್ಲಿ ಓದಿರುವ ರಾಯಚೂರು ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಬಂಪರ್ ಅವಕಾಶ. ಯಾವುದೇ ಶುಲ್ಕ ಮತ್ತು ಪರೀಕ್ಷೆ ಇಲ್ಲದಿರುವುದರಿಂದ, ಕೋವಿಡ್ ಸಮಯದಲ್ಲಿ ಕೆಲಸ ಮಾಡಿದ ಅನುಭವ ಪ್ರಮಾಣಪತ್ರ (Experience Certificate) ಇದ್ದರೆ ಅದನ್ನು ತಪ್ಪದೇ ಅಪ್‌ಲೋಡ್ ಮಾಡಿ, ಇದರಿಂದ ಆಯ್ಕೆಯಾಗುವ ಅವಕಾಶ ಹೆಚ್ಚಿರುತ್ತದೆ. ಕಡೇ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸಿ.”
ಇದನ್ನೂ ಓದಿ: ಗುಡ್ ನ್ಯೂಸ್: 56 ಸಾವಿರ ಹುದ್ದೆಗಳ ನೇಮಕಾತಿಗಾಗಿ ಸರ್ಕಾರದಿಂದ ಅಧಿಕೃತ ಆದೇಶ